ಪುತ್ತೂರು, ಏ. 19 (DaijiworldNews/HR): ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಇಂದು ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸುತ್ತಿರುವ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಇಂದು ನಡೆಯುತ್ತಿರುವ ಪ್ರೌಢಶಾಲಾ ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿರುವುದಾಗಿ ವರದಿಯಾಗಿದೆ.
ಇನ್ನು ಮೂರು ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ಕೂಡಾ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದ್ದು, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರೌಢಶಾಲೆಗೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.