ಮಣಿಪಾಲ, ಏ. 22(DaijiworldNews/HR): ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಮಣಿಪಾಲದ ಆಶ್ಲೇಶ್ ಹೋಟೆಲ್ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಕಟ್ಟಡದಲ್ಲಿದ್ದ ಗೋಡೌನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂಧಿ ಕಾರ್ಯಾಚರಣೆ ನಡೆಸಿದ್ದಾರೆ.
ಇನ್ನು ಮುಂಜಾಗ್ರತೆಯಾಗಿ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು, ಅಂಗಡಿಯಲ್ಲಿ ಪಟಾಕಿ, ಡಿಯೋಡ್ರೆಂಟ್ ಗ್ಯಾಸ್ ಮುಂತಾದ ಸಾಮಾಗ್ರಿ ಇದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.