ಕುಂದಾಪುರ, ಏ 23 (DaijiworldNews/MS): ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ.
ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು ಸೋಂಕು ದೃಢವಾಗಿದೆ.
ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.