ಮಂಗಳೂರು, ಏ. 24 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಶನಿವಾರದಂದು ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ.
ಜಿಲ್ಲೆಯಲ್ಲಿ ಶನಿವಾರದಂದು 517 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನು ಶನಿವಾರದಂದು 128 ಮಂದಿ ಕೊರೋನಾದಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇನ್ನು ಇಂದು ಸೋಂಕಿಗೆ ಇಬ್ಬರು ಬಲಿಯಾದ ಬಗ್ಗೆ ವರದಿಯಾಗಿದೆ.
ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 747 ಕ್ಕೆ ಏರಿಕೆಯಾಗಿದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 40,720 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 3,577 ಆಕ್ವೀವ್ ಪ್ರಕರಣಗಳಿವೆ.