ಮಂಗಳೂರು, 25 (DaijiworldNews/SM): ದ.ಕ. ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರವಿವಾರದಂದು 564 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇಂದು 165 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಏ.25ರಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಓರ್ವ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 748ಕ್ಕೆ ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 41,284 ಪಾಸಿಟಿವ್ ಕೇಸ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ 3,975 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.