ಮಂಗಳೂರು, ಏ 27 (DaijiworldNews/MS): ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹತ್ತು ಮಂದಿ ಪೊಲೀಸರಿಗೆ ಕೋವಿಡ್ -19 ಸೋಂಕು ಪಾಸಿಟಿವ್ ದೃಢವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.
ಸಾಂದರ್ಭಿಕ ಚಿತ್ರ
ಹತ್ತು ಮಂದಿ ಪೊಲೀಸರಲ್ಲಿ ಇಬ್ಬರಲ್ಲಿ ಕೊಂಚ ಮಟ್ಟಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಮ್ ಐಸೊಲೇಷನ್ ನಲ್ಲಿದ್ದಾರೆ ಎಂದರು. ಸದ್ಯ ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದರು.
ಹತ್ತು ಮಂದಿ ಪೊಲೀಸರಲ್ಲಿ ಎಲ್ಲರೂ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದು, ಆರು ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಸಿಬ್ಬಂದಿಗೆ ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇನೆ ಎಂದು ಆಯುಕ್ತ ಎನ್.ಶಶಿಕುಮಾರ್ ಹೇಳಿದರು.