ಕಾಸರಗೋಡು, ಏ.27 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 906 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 617 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 8,895 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದು, 11,910 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 45,076 ಮಂದಿಗೆ ಸೋಂಕು ಪತ್ತೆಯಾಗಿದ್ದು, 35, 826 ಮಂದಿಗೆ ಗುಣಮುಖರಾಗಿದ್ದಾರೆ.
ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ್ದರೂ ಈ ಆದೇಶವನ್ನು ಉಲ್ಲಂಘಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 1,04,559 ಮಂದಿ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.
ಇನ್ನು 12,144 ಮಂದಿ ವಿರುದ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆಯಂತೆ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.