ಮಂಗಳೂರು, ಏ. 27 (DaijiworldNews/SM): ಕೊರೋನಾ ನಿಯಂತ್ರಣಕ್ಕೆ ಈಗಾಗಲೇ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಈ ನಡುವೆಯೂ ಅನೇಕ ಮಂದಿ ನಿಯಮ ಉಲ್ಲಂಘಿಸಿ ದಂಡಕ್ಕೆ ಗುರಿಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ 49,281 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಇವರಿಂದ ಒಟ್ಟು 51,34,180 ರೂಪಾಯಿಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ. ಈ ಬಗ್ಗೆ ಜಿಲ್ಲಾಡಳಿತದಿಂಡ ಅಧಿಕೃತ ಮಾಹಿತಿ ಲಭಿಸಿದೆ.
ಇನ್ನು ಜಿಲ್ಲೆಯಲ್ಲಿ ಮಾಸ್ಕ್ ಧರಿಸುವ ನಿಯಮವನ್ನು ಕಡ್ಡಾಯಗೊಳಿಸಿದ್ದರೂ ಕೂಡ ಅನೇಕ ಮಂದಿ ಇದನ್ನು ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರೆಸಿದ್ದಾರೆ.