ಮಂಗಳೂರು, ಏ. 27 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 486 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಂದು 225 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಇಂದು ಜಿಲ್ಲೆಯಲ್ಲಿ ಕೊರೋನಾಗೆ ಮೂರು ಮಂದಿ ಬಲಿಯಾಗಿದ್ದಾರೆ. ಆ ಮೂಲಕ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 751ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 42,065 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 4,290 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.