ಮಂಗಳೂರು, ಏ. 29 (DaijiworldNews/SM): ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಾರ್ಡಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ಭೇಟಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಹಲವು ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರೋಂದಿಗೆ ಮಾತನಾಡಿದ್ದಾರೆ. ಹಾಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿಗುವ ಚಿಕಿತ್ಸೆ ಹಾಗೂ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದ್ದಾರೆ. ಅಲ್ಲದೆ, ಕೋವಿಡ್ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದ್ದಾರೆ.