ಉಡುಪಿ, ಏ. 29 (DaijiworldNews/SM): ಜಿಲ್ಲೆಯಲ್ಲಿ ಗುರುವಾರ 568 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಗುರುವಾರದಂದು 439 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ನಡುವೆ ಇಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 2358 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 30872 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು 196 ಒಟ್ಟು ಸೋಂಕಿಗೆ ಬಲಿಯಾಗಿರುವ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.