ಉಡುಪಿ, ಏ. 30 (DaijiworldNews/SM): ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಸರಕಾರಿ ಮತ್ತು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳ ಸಂಖ್ಯೆಯ ಹೆಚ್ಚಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವೈದ್ಯಕೀಯ ಎಕ್ಸ್ ಪರ್ಟ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದರೂ ಕೂಡಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತೊಂದರೆಯಾಗದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರಸ್ತುತ ಇರುವ ಐಸಿಯು ಬೆಡ್ ಗಳಗಿಂತಲೂ ಇನ್ನೂ ಹೆಚ್ಚಿನ ಸಂಖ್ಯೆಯ ಐಸಿಯು ಬೆಡ್ ಗಳನ್ನು ಸಿದ್ದಮಾಡಲು ಸಾಧ್ಯತೆಗಳಿದ್ದಲ್ಲಿ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ. ಬೆಡ್ ಮೇನಜ್ ಮೆಂಟ್ ಸಿಸ್ಟಂ ನಲ್ಲಿ ಪ್ರತೀ ದಿನ ಆಸ್ಪತ್ರೆಗೆ ದಾಖಲಾಗುವ ಮತ್ತು ಬಿಡುಗಡೆಯಾಗುವ ರೋಗಿಗಳ ವಿವರಗಳನ್ನು ದಾಖಲಿಸಿ, ಲಭ್ಯವಿರುವ ಬೆಡ್ ಗಳ ಸಂಖ್ಯೆಯನ್ನು ಪ್ರತೀ ದಿನ ನಿಖರವಾಗಿ ನಮೂದಿಸಲು ಅನುಕೂಲವಾಗಲು ಖಾಸಗಿ ಆಸ್ಪತ್ರೆಗಳು ತಪ್ಪದೆ ಮಾಹಿತಿ ನೀಢಬೇಕು , ಇದರಿಂದ ಬೆಡ್ಗಳ ಸಮಸ್ಯೆ ಕಂಡುಬರದಂತೆ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.
ಕೋವಿಡ್ ಸೋಂಕಿತನ್ನು ಸೂಕ್ತ ರೀತಿಯಲ್ಲಿ ಪರೀಕ್ಷಿಸಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಿ, ಸೋಂಕು ತೀವ್ರವಾಗಿಲ್ಲದೇ ಹೋಂ ಐಸೋಲೇಶನ್ ಅಗತ್ಯವಿರುವ ಸೋಂಕಿತರನ್ನು ಅನಗತ್ಯವಾಗಿ ದಾಖಲು ಮಾಡಬೇಡಿ , ಒಂದು ಆಸ್ಪತ್ರೆಯಿಂಧ ಮತ್ತೊಂದು ಆಸ್ಪತ್ರೆಗೆ ಸೋಂಕಿತರನ್ನು ವರ್ಗಾಯಿಸುವಾಗ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿ, ರೋಗಿಯ ಸಂಪೂರ್ಣ ವಿವರಗಳನ್ನು ದಾಖಲಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೀಡುವ ಆಕ್ಸಿಜಿನ್ ಪೋಲಾಗದಂತೆ ಎಚ್ಚರವಹಿಸಿ, ಈ ಬಗ್ಗೆ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿ ನೀಡಿ, ರೋಗಿಗಳಿಗೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜಿನ್ ನೀಡುವ ಕುರಿತು ಮಾಹಿತಿ ನೀಡಿ, ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಆಕ್ಸಿಜನ್ ನೀಡುವುದು, ಆಕ್ಸಿಜಿನ್ ಸೋರಿಕೆಯನ್ನು ತಡೆಗಟ್ಟಿ. ಪ್ರಸ್ತುತ ಜಿಲ್ಲೆಯಲ್ಲಿ ಆಕ್ಸಿಜಿನ್ ಕೊರತೆ ಇಲ್ಲ. ರೆಮಿಡಿಸಿವರ್ ನ್ನು ಸಹ ಅವಶ್ಯವಿದ್ದ ರೋಗಿಗಳಿಗೆ ಮಾತ್ರ ನೀಡಿ ಎಂದು ಡಿಸಿ ಸೂಚಿಸಿದರು.