ಪುತ್ತೂರು, ಮೇ 1 (DaijiworldNews/MS): ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಎಂದು ಗುರುತಿಸಲಾಗಿದೆ. . ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ ಕಟ್ಟಡದ ಹೊರ ಜಗಲಿಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮುಂಜಾನೆ ಪತ್ತೆಯಾಗಿದೆ.
ತಲೆಯಲ್ಲಿ ಮುಂಡಾಸು ಕಟ್ಟಿದ ಹಾಗೆಯೇ ಇದ್ದು, ಕಾಲು ನೆಲಕ್ಕೆ ತಾಗುವ ರೀತಿಯಲ್ಲಿ ಮೃತದೇಹವಿದ್ದ ಕಾರಣ ಸಾವಿನ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನ ಸ್ಥಳಕ್ಕೆ ಸಂಪ್ಯ ಪೊಲೀಸರು ಅಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821