ಬೆಂಗಳೂರು,ಸೆ 24 (MSP) : ಯೂತ್ ಕಾಂಗ್ರೆಸ್ ಅಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಯಲಹಂಕದ ಅಲ್ಲಾಳ ಸಂದ್ರದಲ್ಲಿ ಸೆ.23 ರ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಅಲ್ಲಾಳಸಂದ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್ (26) ಎಂದು ಗುರುತಿಸಲಾಗಿದೆ.
ರಾತ್ರಿ ಸಿನಿಮಾ ನೋಡಿ ವಾಪಸ್ ಬರುತ್ತಿರುವಾಗ ಐದು ಜನ ದುಷ್ಕರ್ಮಿಗಳು ಅರುಣ್ ರನ್ನು ಅಡ್ಡ ಹಾಕಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳ ದಾಳಿಗೆ ತೀವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಅರುಣ್ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಯಲಹಂಕ ನ್ಯೂ ಟೌನ್ ಪೊಲೀಸರು ಬಲೆ ಬೀಸಿದ್ದಾರೆ.