ಮಂಜೇಶ್ವರ, ಮೇ 09 (DaijiworldNews/SM): ಮಂಜೇಶ್ವರ ವಿಧಾನ ಕ್ಷೇತ್ರಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಶಾಸಕ ಎ.ಕೆ.ಎಂ. ಅಶ್ರಫ್ ರವರಿಗೆ ಕೊರೋನಾ ಪಾಸಿಟಿವ್ ದ್ರಢಪಟ್ಟಿದೆ.
ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಶ್ರಫ್ ರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಮೈಕೈ ನೋವು ಹಾಗೂ ಗಂಟಲು ನೋವು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ತಪಾಸಣೆ ನಡೆಸಿದಾಗ ಸೋಂಕು ಪತ್ತೆಯಾಗಿದೆ.
ಕಳೆದ ಕೆಲವು ದಿನಗಳಿಂದ ಶಾಸಕರೊಂದಿಗೆ ಸಂಪರ್ಕ ಹೊಂದಿದವರು ವ್ಯಕ್ತಿಗಳಿಗೆ ಕ್ವಾರಂಟೈನ್ ಗೆ ತೆರಳುವಂತೆ ಸಾಮಾಜಿಕ ಜಾಲ ತಾಣಗಳ ಮೂಲಕ ಅಶ್ರಫ್ ರವರು ಮನವಿ ಮಾಡಿದ್ದಾರೆ.