ಕಾಸರಗೋಡು, ಮೇ.12 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 969 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 59,549ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾ ದೃಢಪಟ್ಟವರ ಪೈಕಿ 11 ಮಂದಿ ವೈದ್ಯಕೀಯ ಸಿಬ್ಬಂದಿಗಳು ಒಳಗೊಂಡಿದ್ದಾರೆ.
ಈ ನಡುವೆ 476 ಮಂದಿ ಗುಣಮುಖರಾಗಿದ್ದು, ಈವರೆಗೆ 42,342 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ಜಿಲ್ಲೆಯಲ್ಲಿ ಸದ್ಯ 16,776 ಸಕ್ರಿಯ ಪ್ರಕರಣಗಳಿದ್ದು, 23,152 ಮಂದಿ ನಿಗಾದಲ್ಲಿದ್ದಾರೆ.
ಕೇರಳ ರಾಜ್ಯದಲ್ಲಿ 43,529 ಮಂದಿಗೆ ಸೋಂಕು ದೃಢಪಟ್ಟಿದ್ದು, 4, 32,789 ಮಂದಿ ಚಿಕಿತ್ಸೆಯಲ್ಲಿದ್ದಾರೆ.