ಉಡುಪಿ ಅ: ಇಲ್ಲಿನ ನಗರಸಭೆ ಪೌರಯುಕ್ತರನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸುವಂತೆ ಆಗ್ರಹಿಸಿ ಶುಕ್ರವಾರ, ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕೆಲ ನಗರಸಭೆ ಕಾಂಗ್ರೆಸ್ ಸದಸ್ಯರು ಮಾನಸಿಕ ಅಸ್ವಸ್ಥೆಯನ್ನು ಬಳಸಿಕೊಂಡು ಬೇಳೆ ಬೇಯಿಸಿಕೊಂಡ ವಿಲಕ್ಷಣ ಘಟನೆ ನಡೆದಿದೆ . ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಮಹಿಳೆಯೋರ್ವಳು ಆಗಮಿಸಿ ಬಿಜೆಪಿ ನಾಯಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ದಿಕ್ಕಾರ ಕೂಗಿದಳು. ತನಗೆ ಬಿಜೆಪಿ ಮುಖಂಡರೋರ್ವರು 75 ಲಕ್ಷ ರೂಪಾಯಿ ವಂಚನೆ ಮಾಡಿರುವುದಾಗಿ ಮಹಿಳೆ ಆರೋಪಿಸಿದ್ರು, ಆಕೆಯ ಪೂರ್ವಪರವನ್ನು ವಿಚಾರಿಸಿದಾಗ ಆಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ.
ಮಹಿಳೆಯ ಅಸಾಹಯಕತೆಯನ್ನು ಬಳಸಿಕೊಂಡ ಕೆಲ ನಗರಸಭೆಯ ಕಾಂಗ್ರೆಸ್ ಸದಸ್ಯರು ಪ್ರತಿಭಟನಾ ನಿರತ ಬಿಜೆಪಿ ಮುಖಂಡರಿಗೆ ಈ ರೀತಿಯಾಗಿ ನಿಂದಿಸಲು ಹುನ್ನಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯ ರಂಪಾಟಕ್ಕೆ ಕಾಂಗ್ರೆಸ್ನ ಕೆಲ ಸದಸ್ಯರು ಕಾರಣ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.