ಮಂಗಳೂರು, ಸೆ 27(SM): ಮಂಗಳೂರಿನಿಂದ ಬೆಂಗಳೂರು ಸಂಪರ್ಕಿಸುವ ಶಿರಾಡಿಘಾಟ್ ನಲ್ಲಿ ಪ್ರಯಾಣಿಕರ ವಾಹನಗಳಿಗೆ ಅನುಮತಿ ನೀಡಲಾಗುವುದೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸೆಪ್ಟೆಂಬರ್ 27ರಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಚಾರ್ಮಾಡಿ ಘಾಟ್ ನಲ್ಲಿ ಮಾತ್ರವೇ ವಾಹನಗಳ ಸಂಚಾರವಿದ್ದು, ವಾಹನ ದಟ್ಟನೆ ಹೆಚ್ಚಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಹಿನ್ನೆಲೆ ಶಿರಾಡಿಘಾಟ್ ನಲ್ಲಿ ಪ್ರಯಾಣಿಕರ ವಾಹನಗಳಿಗೆ ಅವಕಾಶ ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.
ದ. ಕ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯವಾದ ಕ್ರಮಗಳನ್ನು ಕೈಗೊಂಡು ಜನಪರ ನಿರ್ಣಯ ಕೈಗೊಳ್ಳಲು ಸಚಿವರು ಹೇಳಿದ್ದಾರೆ. ಇದೇ ರೀತಿ ಸುಳ್ಯ ಸಂಪಾಜೆ ರಸ್ತೆ ನಿರ್ಮಾಣ ಮುಂದಿನ 15 ದಿನಗಳೂಳಗಾಗಿ ಮುಗಿಸಲು ಕಾಮಗಾರಿ ಯನ್ನ ನಡೆಸಲು ಅಗತ್ಯವಾದ ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿದರು.