ನವದೆಹಲಿ, ಸೆ28(SS): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಕೋರ್ಟ್ ಸಮ್ಮತಿ ಸೂಚಿಸಿದೆ. 800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಮಹಿಳೆಯರನ್ನು ದುರ್ಬಲರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು ಎಂದು ಹೇಳಿದ್ದು ಕೊನೆಗೆ ದೇವಸ್ತಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ.
ಮುಟ್ಟಾದ ಮಹಿಳೆಯರಿಗೆ ದೇವಸ್ತಾನದ ಪ್ರವೇಶದ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಕಳೆದ ವರ್ಷದ ಅಕ್ಟೋಬರ್ 13ರಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು. ಸುಪ್ರೀಂಕೋರ್ಟ್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಾಧೀಶರು ಪ್ರತ್ಯೇಕ ತೀರ್ಪನ್ನು ನೀಡಿದ್ದಾರೆ. ದೀಪಕ್ ಮಿಶ್ರಾ ಅವರು ತಮ್ಮ ತೀರ್ಪಿನಲ್ಲಿ ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಕೋರ್ಟ್ ಸಮ್ಮತಿ ಸೂಚಿಸಿದೆ.
ಈ ಹಿಂದೆ ದೇವಸ್ತಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ತಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ.
ಹೆಣ್ಣು ಮಕ್ಕಳಿಗೆ 10 ವರ್ಷಕ್ಕೂ ಮೊದಲೇ ಋತುಸ್ರಾವ ಆರಂಭವಾಗಬಹುದು. 50 ವರ್ಷದ ನಂತರವೂ ಇದು ಮುಂದುವರಿಯಬಹುದು. ದೇವಸ್ಥಾನ ಎನ್ನುವುದು ಯಾವತ್ತೂ ಖಾಸಗಿ ಸ್ವತ್ತಲ್ಲ. ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಆಸ್ತಿಗೆ ಯಾರಿಗೆ ಯಾವಾಗ ಬೇಕಾದರೂ ಪ್ರವೇಶ ಮಾಡಬಹುದು ಎಂದು ಕೋರ್ಟ್ ಹೇಳಿದೆ.