ಪುತ್ತೂರು, ಮೇ 18 (DaijiworldNews/MS): ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಪುತ್ತೂರಿನ ಕೆಮ್ಮಾಯಿಯಲ್ಲಿ ಮೇ 18 ರ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಸಾವನ್ನಪ್ಪಿದವರನ್ನು ಬೆಳ್ತಂಗಡಿ ಬಾರ್ಯ ನಿವಾಸಿ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ರಸ್ತೆ ಚಾಲಕನ ಹತೋಟಿ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ವ್ಭಜಕದ ಮೇಲೇರಿದೆ. ಇದರ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.