ಬೆಳ್ತಂಗಡಿ, ಸೆ 28(SM): ತಾಲೂಕಿನ ಪಟ್ರಮೆ ಗ್ರಾಮದ ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ನಡೆದಿದೆ. ಪಟ್ಟೂರು ನಿವಾಸಿ ಅಬೂಬಕ್ಕರ್ ಎಂಬುವವರ ಹೆಂಚು ಛಾವಣಿ ಮನೆಗೆ ಬೆಂಕಿ ತಗುಲಿದ್ದು, ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಘಟನೆಯಲ್ಲಿ ಸುಮಾರು 1,50,000 ರೂಪಾಯಿ ನಷ್ಟ ಅಂದಾಜಿಸಲಾಗಿದೆ. ಮನೆಯಲ್ಲಿದ್ದ ನಗದು 22 ಸಾವಿರ ರೂಪಾಯಿ, ಮನೆಯ ದಾಖಲೆ ಪತ್ರಗಳು, ಎರಡು ಆಡುಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಅಬೂಬಕ್ಕರ್ ಸಂಬಂಧಿ ಹಸೈನಾರ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.