ಬಂಟ್ವಾಳ, ಅ 7: ತಾಲೂಕಿನ ಪುದು ಗ್ರಾಮದ ಮಜಿ ಸಮೀಪದ ನಡುಬೈಲು ಗುಡ್ಡೆಯಲ್ಲಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇಟ್ಟ ಉರುಳಿಗೆ ಚಿರತೆ ಬಿದ್ದು ಬಲಿಯಾಗಿದೆ ಎಂದು ಇಲ್ಲಿನ ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಅಧಿಕಾರಿ ವರ್ಗದವರು ಬೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.