ಕಾಸರಗೋಡು, ಮೇ.26 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 572 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದುವರೆಗೆ 69,197 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 788 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 61,476 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 7,226 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 31,809 ಮಂದಿ ನಿಗಾದಲ್ಲಿದ್ದಾರೆ.