ಉಡುಪಿ, ಮೇ 28(DaijiworldNews/MS): ಪ್ರಸ್ತುತ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಯಾಗಿರುವ ಡಾ.ನಾಗಭೂಷಣ ಉಡುಪ ಅವರನ್ನು ಉಡುಪಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ (ಡಿಎಚ್ಓ) ನೇಮಿಸಲಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ಮೇ 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಈ ಹಿನ್ನಲೆಯಲ್ಲಿ ಸೂಡ ಅವರ ಸ್ಥಾನಕ್ಕೆ ಡಾ. ನಾಗಭೂಷಣ್ ಅವರು ಆಯ್ಕೆ ಆಗಿದ್ದು ಇದೇ ಮೇ 31ರಂದು ಡಾ.ಸೂಡರಿಂದ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.