ಮಂಗಳೂರು, ಜೂ 01(DaijiworldNews/MS): ಕೊವೀಡ್ ನಿಯಂತ್ರಣ ಲಸಿಕೆ ಕೇವಲ ಶ್ರೀಮಂತರಿಗೆ ಮಾತ್ರವಲ್ಲ, ನಮಗೂ ಲಸಿಕೆ ಬೇಕು ಎಂಬ ಆಂದೋಲನವನ್ನು ಆರಂಭಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಕಟಿಸಿದೆ.
ಈ ಬಗ್ಗೆ ಮಂಗಳವಾರ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, " ಯುವಜನರಿಗೆ, ಗ್ರಾಮೀಣ ಪ್ರದೇಶದ ಜನತೆಗೆ, ಬಡವರಿಗೆ ಕೋವಿದ್ ಲಸಿಕೆ ದೊರೆಯುತ್ತಿಲ್ಲ. ಬಿಜೆಪಿ ಸರಕಾರ ಕೇವಲ ಶ್ರೀಮಂತರಿಗೆ ಮಾತ್ರ ಲಸಿಕೆ ಪೂರೈಸುವ ನೀತಿಯನ್ನು ಅನುಸರಿಸುತ್ತಿದೆ. 18ರಿಂದ 44ರ ವಯಾ ಮಾನದವರಿಗೆ ಲಿಸಿಕೆ ನೀಡುವುದನ್ನು ಸರಕಾರ ಸ್ಥಗಿತ ಮಾಡಿದೆ.ಆದರೆ, ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ದರದಲ್ಲಿ ವಾಕ್ಸಿನ್ ನೀಡಲಾಗುತ್ತಿದೆ. ಜನವಿರೋಧಿ ಲಸಿಕೆ ನೀತಿ ಹೊಂದಿರುವ ಕೇಂದ್ರ ಸರಕಾರದ ವಿರುದ್ಧ ನಮಗೂ ಲಸಿಕೆ ಬೇಕು ಎಂಬ ಆಂದೋಲನವನ್ನು ಆರಂಭಿಸಲಿದೆ ಎಂದು ಹೇಳಿದ್ದಾರೆ.
ಕೊರೋನಾ ಸೋಂಕು ನಿಯಂತ್ರಣ ಮಾಡಲು ಪ್ರಮುಖ ಆಯುಧವಾದ ಲಸಿಕೆ ನೀತಿ ಸಂಪೂರ್ಣ ವೈಫಲ್ಯವಾಗಿದ್ದು, ಲಸಿಕೆಯ ಪ್ರೈಸಿಂಗ್ ನೀತಿ ಜನವಿರೋಧಿ ಆಗಿದೆ ದೇಶದಲ್ಲಿ ಕೊರೋನಾ ಎರಡನೇ ಅಲೆಯೂ ಹೆಚ್ಚಿನ ಸಂಕಷ್ಟವನ್ನು ಉಂಟು ಮಾಡಲು ನರೇಂದ್ರ ಮೋದಿ ಸರಕಾರದ ಲಸಿಕೆ ನೀತಿಯೇ ಕಾರಣವಾಗಿದೆ. ಸಕಾಲದಲ್ಲಿ ಲಸಿಕೆ ಉತ್ಪಾದನೆಗೆ ಅನುದಾನ ಮತ್ತು ಉತ್ತೇಜನ ನೀಡದೆ ವಿಫಲವಾಗಿರುವುದರಿಂದ ಸಾವಿರಾರು ಮಂದಿ ಜೀವಕಳಕೊಂಡಿದ್ದು, ಇದರ ಜವಾಬ್ದಾರಿಯನ್ನು ಯಾರು ಹೊರುತ್ತಾರೆ ಎಂದವರು ಪ್ರಶ್ನಿಸಿದರು.
ದೇಶದಲ್ಲಿ ಕೊರೋನಾ ಎರಡನೇ ಅಲೆಯೂ ಹೆಚ್ಚಿನ ಸಂಕಷ್ಟವನ್ನು ಉಂಟು ಮಾಡಲು ನರೇಂದ್ರ ಮೋದಿ ಸರಕಾರದ ಲಸಿಕೆ ನೀತಿಯೇ ಕಾರಣವಾಗಿದೆ. ಸಕಾಲದಲ್ಲಿ ಲಸಿಕೆ ಉತ್ಪಾದನೆಗೆ ಅನುದಾನ ಮತ್ತು ಉತ್ತೇಜನ ನೀಡದೆ ವಿಫಲವಾಗಿರುವುದರಿಂದ ಸಾವಿರಾರು ಮಂದಿ ಜೀವಕಳಕೊಂಡಿದ್ದು, ಇದರ ಜವಾಬ್ದಾರಿಯನ್ನು ಯಾರು ಹೊರುತ್ತಾರೆ ಎಂದವರು ಪ್ರಶ್ನಿಸಿದರು.
18 ರಿಂದ 44ರ ಹರೆಯದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆಯೇ ಹೊರತು ಈ ವಯೋಮಾನದವರಿಗೆ ಎಲ್ಲಿಯೂ ಲಸಿಕೆ ದೊರೆಯುತ್ತಿಲ್ಲ. ಈ ಹರೆಯದ ಯುವಕರಿಗೆ ಕೂಡಲೇ ಲಸಿಕೆ ನೀಡಬೇಕು. ತಪ್ಪಿದ್ದಲ್ಲಿ ನಮಗೂ ಬೇಕು ಲಸಿಕೆ ಎಂಬ ಆಂದೋಲನ ಮಾಡಲಾಗುವುದು ಎಂದು ಅವರು ಹೇಳಿದರು. ದೇಶಕ್ಕೆ ದೊರೆತಾಗಿನಿಂದ ಪೊಲಿಯೊ ತನಕ ಎಲ್ಲಾ ಲಸಿಕೆಗಳನ್ನು ಇದುವರೆಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಪೂರೈಸಿದೆ. ಆದರೆ, ನರೇಂದ್ರ ಮೋದಿ ಸರ್ಕಾರದ ದೋಷಪೂರಿತ ನೀತಿಯಿಂದಾಗಿ ಕೇಂದ್ರ-ರಾಜ್ಯ, ಖಾಸಗಿ ಈ ರೀತಿಯಾಗಿ ದುಬಾರಿ ಹಣಕೊಟ್ಟು ಲಸಿಕೆ ಹಾಕಿಸಿಕೊಳ್ಳುವ ಕಟ್ಟ ವ್ಯವಸ್ಥೆ ಮಾಡಲಾಗಿದೆ. ಇದರಿಂದ ದೇಶದ ಕೋಟ್ಯಾಂತರ ಜನರಿಗೆ ಅವರ ಹಕ್ಕಿನ ಲಸಿಕೆ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಕೇಂದ್ರ ಸರ್ಕಾರವೇ ಎಲ್ಲರಿಗೂ ಉಚಿತ ಲಸಿಕೆ ಪೂರೈಕೆ ಮಾಡಬೇಕು ಎಂದರು. ಕೊರೊನಾ ಎರಡನೇ ಅಲೆಯಿಂದಾಗಿ ಯುವಸಮುದಾಯ ಸಹಿತ ಸಾಕಷ್ಟು ಜನರ ಪ್ರಾಣ ಕಳೆದುಕೊಂಡಿದ್ದಾರೆ, ಈ ದುರಂತ ಮೋದಿ ನಿರ್ಮಿತ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರ.ಕಾರ್ಯದರ್ಶಿಗಳಾದ ಸರ್ಫರಾಜ್ ನವಾಝ್, ಆಶಿತ್ ಪಿರೇರಾ, ಸುಳ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಾಹುಲ್ ಹಮೀದ್, ಜಿಲ್ಲಾ ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, NSUI ರಾಷ್ಟ್ರೀಯ ಸಂಯೋಜಕ ಅನ್ವೀತ್ ಕಟೀಲ್, ನವಾಲ್ ಉಪ್ಪಿನಂಗಡಿ, ಎಂ ತೌಫೀಕ್, ದೀಕ್ಷಿತ್ ಅತ್ತಾವರ್, ರೋಷನ್ ರೈ, ಪ್ರಸಾದ್ ಗಾಣಿಗ, ಹಸನ್ ಡೀಲ್ಸ್, ಮೀನಾ ತೆಲ್ಲಿಸ್, ಇಸ್ಮಾಯಿಲ್ ಸಿದ್ದಿಕ್, ಅರ್ಷದ್ ಮುಲ್ಕಿ, ಫಯಾಜ್ ಅಮೇಮಾರ್, ಅಲ್ಫಾಝ್, ಶಾಫಿ ಕೈಕಂಬ ಮತ್ತು ಇಮ್ರಾನ್ ಶಾಂತಿಅಂಗಡಿ ಉಪಸ್ಥಿತರಿದ್ದರು.