ಮಂಗಳೂರು, ಜೂ 3(DaijiworldNews/MS): ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಳಾಯಿ ದೇವಸ್ಥಾನವೊಂದರ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಬಾಗಲಕೋಟೆ ಮೂಲದ ಸುನಿಲ್ ಎಂದು ಗುರುತಿಸಲಾಗಿದೆ. ಕುಳಾಯಿ ದೇವಸ್ಥಾನವೊಂದರ ಸಮೀಪದ ಖಾಲಿ ಜಾಗದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೂಲಿ ಕೆಲಸ ಮಾಡುತ್ತಿದ್ದ ಈತ ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಬೆಳಗ್ಗೆ ಕೆಲಸಕ್ಕೆ ತೆರಳುವ ಜನ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ
ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ಸಾಗಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821)