ಮಂಗಳೂರು, ಜೂ 4(DaijiworldNews/MS): ಜನಪ್ರಿಯ ಮತ್ತು ಪ್ರಮುಖ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆಯುತ್ತಿರುವ ಸೈಬರ್ ಖದೀಮರು ಈಗ ನಗರ ಪೊಲೀಸ್ ಆಯುಕ್ತರ ಫೇಸ್ಬುಕ್ ಖಾತೆಯನ್ನು ನಕಲಿ ಮಾಡಿದ್ದಾರೆ.
ಈ ಬಗ್ಗೆ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ " ನನ್ನ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಲಾಗಿದೆ. ಯಾವನೇ ವ್ಯಕ್ತಿ ಯಾವುದೇ ರೀತಿಯ ಸಹಾಯ ಯಾಚಿಸಿದರೂ ಸ್ಪಂದನೆ ಮಾಡಬಾರದು" ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳ ನಕಲಿ ಫೇಸ್ಬುಕ್ ಖಾತೆಯನ್ನು ರಚಿಸಲಾಗಿತ್ತು. ಬುಧವಾರದಂದೂ ಕೂಡಾ ಅಪರಿಚಿತ ವ್ಯಕ್ತಿಗಳು ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಖದೀಮರು ಹಣ ಕೋರಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.