ಮಂಗಳೂರು, ಜೂ. 04 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೋ ವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, ಜಿಲ್ಲೆಗೆ ಒಟ್ಟು 13 ಸಾವಿರ ಡೋಸ್ ಕೋ ವ್ಯಾಕ್ಸಿನ್ ಬಂದಿದೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಲಭ್ಯವಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.
ಜೂನ್ 6ರ ರವಿವಾರದಿಂದ ನಿತ್ಯ ಲಸಿಕಾ ಶಿಬಿರ ಆಯೋಜಿಸಲಾಗುವುದು. ಫಸ್ಟ್ ಡೋಸ್ ಪಡೆದವರಿಗೆ ಎರಡನೇ ಡೋಸ್ ಲಸಿಕೆ ವಿತರಿಸಲಾಗುವುದು. 4 ರಿಂದ 6 ವಾರ ಪೂರ್ಣಗೊಳಿಸಿ ಅರ್ಹರಿಗೆ ವ್ಯಾಕ್ಸಿನ್ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇನ್ನು ಜಿಲ್ಲೆಯ ಯಾವುದೇ ಕೇಂದ್ರಗಳಲ್ಲಿ, ಯಾವುದೇ ದಿನ ಲಸಿಕೆ ಪಡೆಯಲು ಅವಕಾಶವಿದೆ. ಮುಂಜಾನೆ 9ರಿಂದ ಸಂಜೆ 4ವರೆಗೆ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.