ಮಂಗಳೂರು, ಅ05(SS): ವಾಯು ಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುತ್ತಿದ್ದು, ಸಮುದ್ರ ಮಧ್ಯೆ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಗಳಿದೆ. ಈ ಹಿನ್ನೆಲೆಯಲ್ಲಿ, ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ದಡಕ್ಕೆ ಮರಳುತ್ತಿದ್ದಾರೆ.
ಈಗಾಗಲೇ ಭಾರೀ ಚಂಡಮಾರುತ ಬೀಸುವ ಎಚ್ಚರಿಯನ್ನು ಹವಾಮಾನ ಇಲಾಖೆ ರವಾನಿಸಿದೆ. ಮಾತ್ರವಲ್ಲ, ಅಕ್ಟೋಬರ್ 6ರಿಂದ 8ರವರೆಗೆ ಅರಬ್ಬೀ ಸಮುದ್ರವು ಪ್ರಕ್ಷುಬ್ಧಗೊಳ್ಳುವ ಸಂಭವವಿದೆ ಎಂದು ತಿಳಿಸಿದೆ.
ಉಡುಪಿ, ಮಂಗಳೂರು ಸೇರಿದಂತೆ ಕರಾವಳಿಯ ಸುತ್ತ ಮುತ್ತಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಮಾತ್ರವಲ್ಲ, ಸಮುದ್ರ ಪ್ರಕ್ಷುಬ್ದಗೊಳ್ಳುತ್ತಿದ್ದು, ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ದಡಕ್ಕೆ ಮರಳುತ್ತಿದ್ದಾರೆ. ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಗಳಿರುವುದರಿಂದ, ಮಂಗಳೂರಿನ 350 ಕ್ಕೂ ಹೆಚ್ಚು ಮೀನುಗಾರಿಕಾ ದೋಣಿಗಳು ದಡಕ್ಕೆ ಮರಳಿದೆ.