ಪುತ್ತೂರು, ಅ10(SS): ಇಲ್ಲಿನ ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ಕೋರ್ಟ್ನಿಂದ ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಅ.31 ರಂದು ಕೋರ್ಟ್ಗೆ ಹಾಜರಾಗುವಂತೆ ತಿಳಿಸಲಾಗಿದೆ.
2014ರಲ್ಲಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶ್ಯಾಂ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶ್ಯಾಂ ಪ್ರಸಾದ್ ಶಾಸ್ತ್ರಿ ರಾಘವೇಶ್ವರ ಸ್ವಾಮೀಜಿ ವಿರುದ್ದ ಅತ್ಯಾಚಾರದ ಆರೋಪ ಮಾಡಿದ್ದ ಪ್ರೇಮಲತಾ ಅವರ ಪತಿ ದಿವಾಕರ ಶಾಸ್ತ್ರಿಯ ಸಹೋದರ. ಶ್ಯಾಮ್ ಪ್ರಸಾದ್ ಅವರು 2014ರ ಸಪ್ಟೆಂಬರ್ 01ರಂದು ಮನೆಯಲ್ಲೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅತ್ಯಾಚಾರ ಕೇಸ್ನಲ್ಲಿ ಸ್ವಾಮೀಜಿ ಪರ ನಿಲ್ಲುವಂತೆ ಬೆದರಿಕೆ ಹಾಕಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಲಾಗಿತ್ತು. ಪುತ್ತೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಳಿಕ ಸರ್ಕಾರ ಸಿಐಡಿಗೆ ವಹಿಸಿತ್ತು.
ಈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ಸೇರಿ ಮೂವರ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಈ ಕೇಸ್ನಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ, ಪುತ್ತೂರು ಹವ್ಯಕ ವಲಯ ಅಧ್ಯಕ್ಷ ಶಿವಶಂಕರ ಭಟ್, ಮತ್ತು ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುದ್ದ ಪುತ್ತೂರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು.
ಇದೀಗ ಮೂವರ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಅ.31 ರಂದು ಕೋರ್ಟ್ಗೆ ಹಾಜರಾಗುವಂತೆ ತಿಳಿಸಲಾಗಿದೆ.