ಬಂಟ್ವಾಳ, ಜೂ. 14 (DaijiworldNews/SM): ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಇವರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ರಕ್ತದಾನ ಶಿಬಿರ ನಡೆದಿದ್ದು, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಶಿಬಿರಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ವಹಿಸಿದ್ದರು. ರಕ್ತದಾನ ಶಿಬಿರದಲ್ಲಿ 109 ಯೂನಿಟ್ ರಕ್ತ ಸಂಗ್ರಹಣೆಯಾಗಿದ್ದು, ಕೋವಿಡ್ ಸಂಕಷ್ಟ ಸಂದರ್ಭದಲ್ಲೂ ನೆರವಾಗುವ ಮಹಾನ್ ಕಾರ್ಯಕ್ಕೆ ಕೈ ಜೋಡಿಸಲಾಗಿದೆ.
ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್ ಎಸ್ ಮೊಹಮ್ಮದ್, ಪದ್ಮಶೇಖರ್ ಜೈನ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಬೇಬಿ ಕುಂದರ್ , ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ , ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಲುಕ್ಮಾನ್ ಬಂಟ್ವಾಳ್, ತಾಲೂಕು ಪಂಚಾಯತ್ ಸದಸ್ಯ ರಾದ ಸಂಜಿವ ಪೂಜಾರಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ ,ಬಂಟ್ವಾಳ ಪುರಸಭಾ ಅಧ್ಯಕ್ಷರಾದ ಮೊಹಮ್ಮದ್ ಶರೀಫ್, ಪುರಸಭಾ ಉಪಾಧ್ಯಕ್ಷ ರಾದ ಶ್ರೀಮತಿ ಜೆಸಿಂತಾ ಡಿ' ಸೋಜ ಮೊದಲಾದವರು ಉಪಸ್ಥಿತರಿದ್ದರು.