ಬಜ್ಪೆ, ಜೂ 18 (DaijiworldNews/MS): ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ನ್ಯಾಯಾಲಯದ ವಾಯಿದೆಗೆ ಹಾಜರಾಗದೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿ ಗ್ರಾಮದ ಹರೀಶ್ ಆಚಾರ್ಯ (38) ಜೂನ್ 17ರಂದು ಬಜಪೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
2013ರ ಜನವರಿ ತಿಂಗಳಲ್ಲಿ ಮುತ್ತೂರು ಗ್ರಾಮದ ಮನೋಲಿ ಗದ್ದೆ ಎಂಬಲ್ಲಿಆರೋಪಿ ಹರೀಶ್ ಆಚಾರಿ ಮನೆಯ ಹೆಂಚನ್ನು ತೆಗೆದು ಕಳ್ಳತನ ಮಾಡಲು ಯತ್ನಿಸಿದಾಗ ಮನೆಯವರ ಬೊಬ್ಬೆ ಕೇಳಿ ಓಡಿಹೋಗಿದ್ದ . ಈತನ ಮೇಲೆ ಕಳ್ಳತನ ಯತ್ನ ಪ್ರಕರಣ ದಾಖಲಾಗಿ ಬಜಪೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗಟ್ಟುವಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರ ಮಾರ್ಗದರ್ಶನದಂತೆ ಡಿಸಿಪಿಯವರ ಹರಿರಾಮ್ ಶಂಕರ್ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಮತ್ತು ಬಜಪೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಅವರ ನೇತೃತ್ವದಲ್ಲಿ ಬಜಪೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು
.