ಕಾಪು, ಜೂ 18 (DaijiworldNews/MS): ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿತ್ರೋಡಿ ನಿವಾಸಿ ಸುಕನ್ಯಾ (52) ಅವರು ನೇಣಿಗೆ ಶರಣಾದ ಘಟನೆ ಗುರುವಾರ ನಡೆದಿದೆ.
ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಸ್ಥಳೀಯರ ಸಹಕಾರದಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತದರೂ ಅದಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸ್ ಠಾಣಾ ಎಸ್ಸೈ ದಯಾನಂದ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821