ಉಡುಪಿ, ಜೂ 19(DaijiworldNews/MS): ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದ್ದರೂ , ಜನ , ವಾಹನ ಸಂಚಾರ ಕಡಿಮೆಯಾಗಿಲ್ಲ. ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ ಮಾಡಿ ವೀಕೆಂಡ್ ಕರ್ಪ್ಯೂ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಘೋಷಿಸಲಾಗಿತ್ತು.
ಆದರೆ ವೀಕೆಂಡ್ ಕರ್ಪ್ಯೂ ಸಮಯದಲ್ಲಿ ಬೆಳಗ್ಗೆ 6 ರಿಂದ ಮದ್ಯಾಹ್ನ 2 ಗಂಟೆಯವರೆಗೆ ತರಕಾರಿ, ದಿನಸಿ ಸಾಮಾಗ್ರಿ ಅಂಗಡಿಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿರುವ ಹಿನ್ನಲೆಯಲ್ಲಿ ಜನ ನಿರಂತರವಾಗಿ ನಗರಕ್ಕೆ ಆಗಮಿಸುತ್ತಿದ್ದಾರೆ. ಉಡುಪಿ ನಗರ ಎಂಟ್ರಿ ಪಾಯಿಂಟ್ ಗಳಲ್ಲಿ ಪೋಲಿಸ್ ಚೆಕ್ ಪೋಸ್ಟ್ ಹಾಕಲಾಗಿದ್ದರೂ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಜನ ಓಡಾಟ ಕಡಿಮೆಯಾಗಿಲ್ಲ. ಹೀಗಾಗಿ ಇಂತಹ ವೀಕೆಂಡ್ ಕರ್ಫ್ಯೂ ಇದ್ದರೆಷ್ಟು ಬಿಟ್ಟರೆಷ್ಟು? ಎಂದು ಪ್ರಶ್ನಿಸುವಂತಾಗಿದೆ.
ವೀಕೆಂಡ್ ಕರ್ಪ್ಯೂ ನಲ್ಲಿ ಫ್ಯಾಕ್ಟರಿ ಗಳು ಕಾರ್ಯನಿರ್ವಹಿಸುವಂತಿಲ್ಲ, ಆದರೆ ಹೆಚ್ಚಿನ ಎಲ್ಲಾ ಅಂಗಡಿಗಳಿಗೆ ವ್ಯವಹಾರ ನಡೆಸಲು ಅವಕಾಶ ಕಲ್ಪಿಸಿ ಆಗಿದೆ .ಇನ್ನೊಂದೆಡೆ ನಗರ ಎಂಟ್ರಿ ಪಾಯಿಂಟ್ ಗಳಲ್ಲಿ ಪೋಲಿಸ್ ಚೆಕ್ ಪೋಸ್ಟ್ ವಾಹನಗಳನ್ನು ಎಂದಿನಂತೆ ಕಠಿಣ ತಪಾಸಣೆ ಮಾಡಿ ಬಿಡುತ್ತಿದ್ದಾರೆ. ಆದರೆ ಜನಸಂಚಾರವೇನೂ ಇದರಿಂದ ಕಡಿಮೆಯಾಗಿಲ್ಲ. ಹೀಗಾಗಿ ಈ ಮಾದರಿಯ ವೀಕೆಂಡ್ ಕರ್ಫ್ಯೂ ಎಷ್ಟು ಫಲಪ್ರದ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.