ಉಡುಪಿ, ಜೂ 22 (DaijiworldNews/MS): ಕೊರೊನಾ ಸೋಂಕಿಗೆ ಒಳಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಎರಡೂವರೆ ವರ್ಷ ಪ್ರಾಯದ ಗಂಡು ಮಗು ಭಾನುವಾರ ಮೃತಪಟ್ಟಿದೆ.
ಮಗು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಜೂ.17 ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿತ್ತು. ಕೊವೀಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಡಿ ಎಚ್ ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 1756 ಕೊರೊನಾ ಸಕ್ರಿಯ ಪ್ರಕರಣಗಳಿವೆ.