ಕಾಸರಗೋಡು, ಜೂ. 23 (DaijiworldNews/SM): ಜಿಲ್ಲೆಯಲ್ಲಿ ಬುಧವಾರ 590 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 291 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 3,748 ಮಂದಿ ಚಿಕಿತ್ಸೆಯಲ್ಲಿದ್ದಾರೆ. 15,610 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 81,681 ಮಂದಿಗೆ ಸೋಂಕು ದ್ರಢಪಟ್ಟಿದ್ದು, 77, 270 ಮಂದಿ ಗುಣಮುಖರಾಗಿದ್ದಾರೆ. ಈ ತನಕ 205 ಮಂದಿ ಜಿಲ್ಲೆಯಲ್ಲಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.