ಕಾರ್ಕಳ, ಜು 01 (DaijiworldNews/PY): ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್ ಶಶಿಧರ್ ಅವರನ್ನು ಶಿವಮೊಗ್ಗದ ಶಿಕಾರಿಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಹಲವು ಸಾಧನೆಗೈದಿರುವ ಶಶಿಧರ್, 2019 ಜನವರಿ 22ರಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದರು.
ಕಳೆದ ಕೆಲ ತಿಂಗಳುಗಳ ಹಿಂದೆಯಷ್ಟೇ ಕಾರ್ಕಳ ತಾಲೂಕು ಪಂಚಾಯತ್ನ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಸಂಸದೆಯ ಕೆಂಗಣ್ಣಿಗೆ ಗುರಿಯಾದರೆ?
ಸಂಸದೆ ಶೋಭಾ ಕರಂದ್ಲಾಜೆ ಅವರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ತಾಲೂಕುಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯನ್ನು ಆಯೋಜಿಸಿದ್ದರು.
ಅದರಂತೆ ಕಾರ್ಕಳ ತಾಲೂಕು ಪಂಚಾಯತ್ ಭೇಟಿ ನೀಡಿ ಸಭೆ ನಡೆಸಿದ್ದರು. ಉಳಿದೆಲ್ಲ ತಾಲೂಕುಗಳಲ್ಲಿ ಸಭೆ ಆಯೋಜನೆಗೊಂಡಾಗ ವರದಿ ಸಂಗ್ರಹಿಸಲು ಮಾಧ್ಯಮಗಾರರಿಗೆ ಅವಕಾಶ ನೀಡಿದ್ದರೂ, ಕಾರ್ಕಳದಲ್ಲಿ ಮಾತ್ರ ಮಾಧ್ಯಮಗಾರರಿಗೆ ಅವಕಾಶ ನೀಡಿರಲಿಲ್ಲ. ಈ ಬೆಳವಣಿಗೆ ಸಂಸದೆ ಶೋಭಾ ಕರಂದ್ಲಾಜೆ ಅವರ ಕೆಂಗಣ್ಣಿಗೂ ಕಾರಣವಾಗಿತ್ತು.