ಮಂಗಳೂರು, ಜು 05 (DaijiworldNews/MS):ನಗರದ ಕದ್ರಿ ಶಿವಭಾಗ್ ನಲ್ಲಿ ಬೀದಿ ನಾಯಿಯನ್ನು ಗುಂಡು ಹಾರಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನೆಂಬುದಾಗಿ ಪೊಲೀಸರು ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ ಆರೋಪಿಗೆ ಕದ್ರಿ ಪೊಲೀಸರು ನೋಟಿಸ್ ನೀಡಿದ್ದಾರೆ. ಆರೋಪಿ ನೀಡುವ ಕಾರಣಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.