ಬೆಂಗಳೂರು, ಅ 11(SM): ರಾಜ್ಯದ ಮೈತ್ರಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್. ಮಹೇಶ್ ಅವರು ತಮ್ಮ ಸಚಿವ ಸ್ಥಾನಕ್ಕೆ ಹಠಾತ್ತನೆ ರಾಜೀನಾಮೆ ನೀಡಿದ್ದಾರೆ. ಬಿಎಸ್ಪಿ ಪಕ್ಷದಿಂದ ಅವರು ಶಾಸಕರಾಗಿ ಆರಿಸಿ ಬಂದಿದ್ದರು.
ಎನ್. ಮಹೇಶ್ ಅವರು ರಾಜೀನಾಮೆ ಪತ್ರವನ್ನು ಗುರುವಾರದಂದು ರಾಜ್ಯಪಾಲರಿಗೆ ರವಾನಿಸಿದ್ದಾರೆ. ನಾಲ್ಕು ತಿಂಗಳಿಂದ ಸಚಿವನಾಗಿ ಕೆಲಸ ಮಾಡಿದ್ದೇನೆ. ಇದರ ನಡುವೆ ಪಕ್ಷದ ಕೆಲಸ, ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಈ ಕಾರಣಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಪ್ರಮುಖ ವಿಚಾರವೆಂದರೆ ಬಿಎಸ್ಪಿ ನಾಯಕಿ ಮಾಯಾವತಿ ಅವರು ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಮಾಡುವುದಿಲ್ಲ ಎಂದಿದ್ದರು. ಅಲ್ಲದೆ ಆಡಳಿತಕ್ಕೊಸ್ಕರ ಕಾಂಗ್ರೆಸ್ ಪಕ್ಷದಲ್ಲಿ ಭಿಕ್ಷೆ ಬೇಡುವುದಿಲ್ಲ ಎಂದಿದ್ದರು. ಅವರು ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ರಾಜ್ಯದ ಮೈತ್ರಿ ಸರಕಾರದಲ್ಲಿ ಸಚಿವರಾಗಿದ್ದ ಮಹೇಶ್ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕಿಯ ನಿರ್ಧಾರದ ಹಿನ್ನೆಲೆ ಮಹೇಶ್ ರಾಜೀನಾಮೆ ನೀಡಿದ್ದಾರೆ ಎಂಬುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.
ರಾಜೀನಾಮೆಗೆ ಮುನ್ನಾ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದಾಗಿ ಹೇಳಿದ ಅವರು, ನಾನು ಕುಮಾರಸ್ವಾಮಿ ಅಥವಾ ಸರ್ಕಾರದ ವಿರೋಧಿ ಅಲ್ಲ. ಉಪಚುನಾವಣೆಯಲ್ಲಿಯೂ ಸಹ ಜೆಡಿಎಸ್ ಪರ ಪ್ರಚಾರ ಮಾಡಲಿದ್ದೇನೆ.