ಬೆಂಗಳೂರು, ಅ12(SS): ನಗರಾಭಿವೃದ್ದಿ ಸಚಿವ ಯುಟಿ ಖಾದರ್ ಕಾಲಿನ ನೋವು ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಖಾದರ್ ಅವರ ಬಲಗಾಲಿನಲ್ಲಿ ಮತ್ತೆ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಅ11) ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆದು ಇದೀಗ ಬೆಂಗಳೂರಿನಲ್ಲಿರುವ ಗೆಳೆಯನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆಯೂ ಖಾದರ್ ಕಾಲು ನೋವಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ ಇದೀಗ ಮತ್ತೆ ಕಾಲು ನೋವು ತೀವ್ರಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಚಿಕಿತ್ಸೆಯಿಂದ ಕಾಲು ನೋವು ನಿವಾರಣೆಯಾಗದೇ ಇದ್ದಲ್ಲಿ ಖಾದರ್ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಮಾತ್ರವಲ್ಲ, ಶಸ್ತ್ರ ಚಿಕಿತ್ಸೆ ಬಳಿಕ ತಿಂಗಳುಗಳ ಕಾಲ ಖಾದರ್ ವಿಶ್ರಾಂತಿ ಪಡೆದುಕೊಳ್ಳುವ ಅವಶ್ಯಕತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.