ಉಡುಪಿ, ಜು 08 (DaijiworldNews/MS): ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಮಳೆಗಾಲ ಮಳೆ ಕಡಿಮೆ ಇರುವುದರಿಂದ ಮಳೆ ಹೆಚ್ಚಾಗುವವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರೀ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇತ್ತು ಈ ಹಿನ್ನಲೆಯಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ ಪ್ರಕಾರ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15ರ ವರೆಗೆ 12ಟನ್ ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಈ ಹಿಂದೆ ಭಾರಿ ವಾಹನಗಳ ಸಂಚಾರ ನಿಷೇಧಕ್ಕೆ ಆದೇಶ ನೀಡಿದ್ದರು.