ಕಾಪು, ಜು 10 (DaijiworldNews/MS): ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ನಲ್ಲಿ ಜು. 9 ರ ಶುಕ್ರವಾರ ರಾತ್ರಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಕಟಪಾಡಿಯ ಅಚ್ಚಾದ ನಿವಾಸಿ ಯಶೋಧರ ಆಚಾರ್ಯ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯಶೋಧರ್ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.