ಬಂಟ್ವಾಳ, ಜು 10 (DaijiworldNews/PY): ಮಳೆಯ ಪರಿಣಾಮ ಮನೆಯೊಂದು ಕುಸಿದು ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಬಂಟ್ವಾಳ- ಮೂಡಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.
ಘಟನೆಯ ಪರಿಣಾಮ ಮನೆಯಲ್ಲಿ ಬಾಡಿಗೆಗೆ ವಾಸವಿರುವ ನವೀನ್ ಹಾಗೂ ಅವರ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮನೆಯ ಗೋಡೆ, ಮೇಲ್ಛಾವಣಿ ಕುಸಿದು ಮನೆಯಲ್ಲಿದ್ದ ಸೊತ್ತುಗಳಿಗೆ ಹಾನಿಯಾಗಿದೆ.