ಕೋಟ, ಜು 13 (DaijiworldNews/MS): ಕೋಟದಿಂದ ಪಡುಕರೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ಒರ್ವನನ್ನು ಕೋಟ ಠಾಣಾಧಿಕಾರಿ ಸಂತೋಷ್ ಬಿ.ಪಿ ನೇತೃತ್ವದ ತಂಡ ಆರೋಪಿಯನ್ನು ಸೋಮವಾರ ಬಂಧಿಸಿದ್ದಾರೆ.
ಕೋಟತಟ್ಟು ಪಡುಕರೆಯ ಇಬ್ರಾಹಿಂ ಅಲಿಯಾಸ್ ಆಕಾಶವಾಣಿ ಇಬ್ರಾಹಿಂ ಎಂದು ಗುರುತಿಸಲಾಗಿದ್ದು ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವಾಗ ಕೋಟದ ವರುಣತೀರ್ಥ ಕೆರೆ ಸಮೀಪ ಅಡ್ಡಗಟ್ಟಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.
ಸುಮಾರು 1ಕೆ.ಜಿ 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಸ್ಥಳಕ್ಕೆ ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಠಾಣೆಯಲ್ಲಿ ತನಿಖೆ ಪ್ರಗತಿಯಲ್ಲಿದೆ.