ಕಾಸರಗೋಡು, ಜು.13 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 657 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 320 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,755 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 94,177 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 87, 664 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇಂದು 3,200 ಮಂದಿಯ ಸ್ಯಾಂಪಲ್ ತಪಾಸಣೆ ನಡೆಸಲಾಗಿದೆ. ಟೆಸ್ಟ್ ಪಾಸಿಟಿವ್ ರೇಟ್ 13. 3 ಕ್ಕೆ ತಲಪಿದೆ.