ಮಂಗಳೂರು, ಜು.16 (DaijiworldNews/HR): ಅಳಿವೆಬಾಗಿಲು ನದಿ ಸಮೀಪ ಮೀನುಗಾರರೊಬ್ಬರು ಬಲೆ ಹರಡಿ ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಎಂದು ಗುರುತಿಸಲಾಗಿದೆ.
ಜಯ ಪುತ್ರನ್ ಅವರು ಅಳಿವೆಬಾಗಿಲಿನ ಸಮೀಪ ಮೀನು ಹಿಡಿಯುತ್ತಿದ್ದಾಗ ಗಾಳಿಯೊಂದಿಗೆ ಭಾರೀ ಮಳೆ ಸುರಿದಿದ್ದು, ಈ ವೇಳೆ ಆಕಸ್ಮಿಕವಾಗಿ ಮೀನು ಹಿಡಿಯುವ ಬಲೆ ಕಾಲಿಗೆ ಸಿಲುಕಿದ ಪರಿಣಾಮ ಈಜಲಾಗದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇನ್ನು ಜಯ ಪುತ್ರನ್ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಮನೆಯವರು ಹುಡುಕಾಡಿದಾಗ ಕಸಬ ಬೆಂಗ್ರೆ ಸಮೀಪ ಜಯ ಅವರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.
ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.