ವಿಧಾನಸಭಾ ಚುನಾವಣೆ ಎಪ್ರಿಲ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಚುನಾವಣೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವುದೇ ಅಡಚಣೆಯಾಗದಂತೆ ಚುನಾವಣೆಗೂ ಮುನ್ನವೇ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿದೆ.ಪರೀಕ್ಷಾ ದಿನಾಂಕ ನಿಗದಿಗೆ ಸಂಬಂಧಿಸಿದಂತೆ ಮಂಡಳಿಯ ಅಧಿಕಾರಿಗಳು, ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಚುನಾವಣಾಧಿಕಾರಿಗಳು, ಚುನಾವಣೆ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಪರೀಕ್ಷೆ ಪೂರ್ಣಗೊಳಿಸುವಂತೆ ಸಲಹೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಚುನಾವಣೆಗೂ ಮೊದಲೇ ಅಂದರೆ, ಬಹುತೇಕ ಮಾರ್ಚ್ ತಿಂಗಳಲ್ಲೇ10 ನೇ ತರಗತಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.