ಮಣಿಪಾಲ, ಜು 16 (DaijiworldNews/PY): ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 30,000 ಮಾಸ್ಕ್ ನೀಡಲಾಯಿತು.
ಶುಕ್ರವಾರ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಅವರು ಮಾಸ್ಕ್ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ ಅವರಿಗೆ ಹಸ್ತಾಂತರಿಸಿದರು.
ಮಣಿಪಾಲ ಸಂಸ್ಥೆಯು ಕೊರೊನಾ ಮಹಾಮಾರಿ ಸಂದರ್ಭದಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿಯ ಡಾ. ಟಿ ಎಂ ಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಾಗಿಡಲಾಗಿತ್ತು. ಈಗ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಮಾಸ್ಕ್ಗಳನ್ನು ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯು ಪರೀಕ್ಷಾ ದಿನದಂದು ವಿದ್ಯಾರ್ಥಿಗಳಿಗೆ ವಿತರಿಸಲಿದೆ. ಜಿಲ್ಲಾ ಸ್ಕೌಟ್ಸ್ ಆಂಡ್ ಗೈಡ್ಸ್ ಇದರ ವಿತರಣೆಯ ಜವಾಬ್ದಾರಿ ವಹಿಸಿಕೊಳ್ಳಲಿದೆ.
ಈ ಸಂದರ್ಭದಲ್ಲಿ ಎನ್.ಹೆಚ್ ನಾಗೂರ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ, ಸ್ಕೌಟ್ಸ್ ಆಂಡ್ ಗೈಡ್ಸ್ನ ಜಿಲ್ಲಾ ಆಯುಕ್ತ ಡಾ. ವಿಜಯೇಂದ್ರ ರಾವ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.