ಉಡುಪಿ, ಜು.17 (DaijiworldNews/HR): ಕರ್ನಾಟಕ ಫ್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಜುಲೈ 19 ಮತ್ತು 22ರಂದು ಜಿಲ್ಲೆಯ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಆ ದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, "ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ.