ಪುತ್ತೂರು, ಜು.18 (DaijiworldNews/HR): ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್ಗೆ ಹಾನಿಯಾಗಿದೆ.
ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ.
ರೈಲು ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.